ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು ಒಟ್ಟು 6,407.82 ಕೋಟಿ ರೂಪಾಯಿ ಮೌಲ್ಯದ 128 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರಾಜ್ಯಾದ್ಯಂತ 33,771 ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿದೆ. 128 ಯೋಜನೆಗಳಲ್ಲಿ 24 ಯೋಜನೆಗಳು ಬೆಂಗಳೂರಿನಲ್ಲಿವೆ ಎಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಾಲಾಪದ ವೇಳೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸದನಕ್ಕೆ ತಿಳಿಸಿದರು.
ಬಜೆಟ್ ಅಧಿವೇಶನದಲ್ಲಿ ಪರಿಷತ್ ಸದಸ್ಯ ಕೇಶವ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉದ್ದಿಮೆ ಸ್ಥಾಪನೆಯಾಗಿದೆ. ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.