ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ: 2,441 ಮಂದಿ ಬಂಧನ

Prasthutha|

ಗುವಾಹಟಿ: ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರಿಸಿರುವ ಅಸ್ಸಾಂ ಪೊಲೀಸರು ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.

- Advertisement -


ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ರಾಜ್ಯಾದ್ಯಂತ 4,074 ಎಫ್ಐಆರ್ಗಳು ದಾಖಲಾಗಿದ್ದು, ಅದರ ಆಧಾರದಲ್ಲಿ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.


ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸ್ಪಷ್ಟಪಡಿಸಿದ್ದು, ಆದರೆ, ಇದು ಚುನಾವಣಾ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.


ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.



Join Whatsapp