ಆರ್ರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: 25 ಮಂದಿಯ ಬಂಧನ

Prasthutha|

ಹಾವೇರಿ: ರಟ್ಟೀಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣ ಬಳಿ ಆರ್ರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪದ ಮೇಲೆ 25 ಮಂದಿಯನ್ನು ಬಂಧಿಸಲಾಗಿದೆ.

- Advertisement -

ಅಕ್ಟೋಬರ್ 7ರಿಂದ ರಟ್ಟೀಹಳ್ಳಿ ಆರ್ಎಸ್ಎಸ್ ಶಿಬಿರ ನಡೆಯುತ್ತಿದ್ದು, ಅಕ್ಟೋಬರ್ 14ರಂದು ಆರ್ಎಸ್ಎಸ್ ಪಥಸಂಚಲನ ನಡೆಯಲಿದೆ. ಹೀಗಾಗಿ ಪಥ ಸಂಚಲನದ ರೂಟ್ ಮ್ಯಾಪ್ ಪರಿಶೀಲನೆಗೆ ಕಾರಿನಲ್ಲಿ ಆರ್ಎಸ್ಎಸ್ ಕಾರ್ಯಕರ್ತರು ತೆರಳಿದ್ದು, ಅವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ಕುರಿತು ತನಿಖೆ ನಡೆಯುತ್ತಿದ್ದು ಪೊಲೀಸ್ ವರದಿ ಇನ್ನಷ್ಟೇ ಹೊರಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಅಂಜುಮನ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹುಸೇನ್ ಖಾಝಿ ಸೇರಿದಂತೆ ಒಟ್ಟು 25 ಮಂದಿಯನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಎಸ್ ಪಿ ಹನುಮಂತರಾಯ ತಿಳಿಸಿದ್ದಾರೆ.

Join Whatsapp