ಆಮ್ಲಜನಕದ ಕೊರತೆಯಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ 25 ಕೊರೊನಾ ಸೋಂಕಿತರು ಸಾವು!
Prasthutha: April 23, 2021

ಹೊಸದಿಲ್ಲಿ: ಆಮ್ಲಜನಕ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಲ್ಲಿ ಒಂದೇ ದಿನ 25 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿರುವ ಘಟನೆ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ನಡೆದಿದೆ.
ಗಂಗಾರಾಮ್ ಆಸ್ಪತ್ರೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ದಾಖಲಾಗಿರುವವರಿಗೆ ಸೂಕ್ತ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದಾರೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸರಿಯಾದ ಆಮ್ಲಜನಕ ವ್ಯವಸ್ಥೆ ಇಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಿಗಿದಿತ ಪ್ರಮಾಣದಲ್ಲಿ ಆಮ್ಲಜನಕ ಸಿಗದ ಕಾರಣ ಗಂಗಾರಾಮ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 25ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,32,730 ಹೊಸ ಕೊರೋನಾ ಪ್ರಕರಣಗಳು ಧೃಡಪಟ್ಟಿದೆ, 2,263 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
