Home ಟಾಪ್ ಸುದ್ದಿಗಳು ಬಿಸಿಲಿನ ತಾಪ ಏರಿಕೆ: 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಬಿಸಿಲಿನ ತಾಪ ಏರಿಕೆ: 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಕನಿಷ್ಠ 25 ಮಂದಿ ಬಲಿಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರದ ಹಲವು ಭಾಗದಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು 2016 ರಿಂದ ಈವರೆಗೆ ವರದಿಯಾದ ಅತಿ ಹೆಚ್ಚು ಸಾವಾಗಿದೆ ಎಂದು ವರದಿ ಹೇಳಿದೆ.

ದೇಶದಾದ್ಯಂತ ಸರಾಸರಿ ಗರಿಷ್ಠ ತಾಪಮಾನವು 33.1 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ, ಇದು ಸಾಮಾನ್ಯಕ್ಕಿಂತ ಸುಮಾರು 1.86 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ.

Join Whatsapp
Exit mobile version