ಹಾವೇರಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಚೆಕ್ ವಿತರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಸಿಎಂ ಬೊಮ್ಮಾಯಿ ನವೀನ್ ಭಾವಚಿತ್ರಕ್ಕೆ ಹೂವು ಹಾಕಿದ್ದಾರೆ.
ಈ ವೇಳೆ ಸಿಎಂ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.