ರಾಜ್ಯಾದ್ಯಂತ ಶೇ.25 ರಷ್ಟು ‘ನಮ್ಮ ಕ್ಲಿನಿಕ್‌’ಗಳಲ್ಲಿ ರಾತ್ರಿ 8ರವರೆಗೆ ಸೇವೆ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್ ಗಳನ್ನು ನಂಬರ್ 1 ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ, ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್‌’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.

- Advertisement -


ಸದ್ಯ ನಮ್ಮ ಕ್ಲಿನಿಕ್‌ಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಸೇವೆ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಹಾಗೂ ಉದ್ಯೋಗಸ್ಥರಿಗೆ ಸಮರ್ಪಕವಾಗಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸಚಿವರು ನಮ್ಮ ಕ್ಲಿನಿಕ್ ಗಳ ಸಮಯ ಬದಲಾವಣೆ ಮಾಡಲು ಮುಂದಾಗಿದ್ದಾರೆ.


ಪ್ರಾಯೋಗಿಕ ಹಂತವಾಗಿ ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ಗಲಳಲ್ಲಿ ಶೇ 25 ರಷ್ಟು ಕ್ಲಿನಿಕ್ಗಲಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ಅಸಹಾಯಕರು ಬಡವರಿಗೆ ಅನುಕೂಲ ಆಗಲಿ ಎಂದು ರಾಜ್ಯದ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ಗಕಳನ್ನು ತೆರೆಯಲಾಗಿತ್ತು. ಆದರೆ, ನಮ್ಮ ಕ್ಲಿನಿಕ್ಗ ಳು ತೆರೆಯುತ್ತಿದ್ದ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ. ಪ್ರಸ್ತುತ ನಮ್ಮ ಕ್ಲಿನಿಕ್ಗ್ಳು ಬೆಳಗ್ಗೆ 9 ಗಂಟೆಗೆ ತೆರದು ಮಧ್ಯಾಹ್ನ 12.30ಕ್ಕೆ ಮುಚ್ಚಲಾಗುತ್ತೆ. ಬಳಿಕ ಮಧ್ಯಾಹ್ನ 2 ಗಂಟೆಗೆ ತೆರೆದು 4.30ಕ್ಕೆ ಕ್ಲೋಸ್ ಮಾಡಲಾಗುತ್ತಿತ್ತು.



Join Whatsapp