ಡಿವೈಡರ್​ಗೆ ಡಿಕ್ಕಿಯಾದ ಬಸ್:​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

Prasthutha|

ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

- Advertisement -

ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಅಪಘಾತ ಸಂಭವಿಸಿದ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.