ಮಳೆಯಿಂದ ಹಾನಿಗೀಡಾಗಿರುವ ಮನೆಗಳಿಗೆ 25 ಸಾವಿರ ರೂ ಪರಿಹಾರ ಧನ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಭಾರೀ ಮಳೆಗೆ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ತೀವ್ರ ಹಾನಿಗೀಡಾಗಿರುವ ಮನೆಗಳ ಕುಟುಂಬಸ್ಥರಿಗೆ 25 ಸಾವಿರ ರೂ ಪರಿಹಾರ ಧನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೀರು ನುಗ್ಗಿ ಸಮಸ್ಯೆಯಾದವರಿಗೆ ಊಟದ ವ್ಯವಸ್ಥೆ ಕಲ್ಪಿಸುತ್ತೇವೆ. ಮತ್ತು ಮನೆ ಕ್ಲೀನ್ ಮಾಡಿಸಿ ಕೊಡುವ ವ್ಯವಸ್ಥೆ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ ಮನೆ ಕಟ್ಟಿಕೊಂಡಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ ಎಂದ ತಿಳಿಸಿದರು.

ಮಳೆಯಿಂದ ಹಾನಿಯಾದ ಬೆಂಗಳೂರಿನ ಕೆಲ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದು, ಹೊಸಕೆರೆಹಳ್ಳಿ ದತ್ತಾತ್ರೇಯ ಟೆಂಪಲ್ ಬಳಿ ಪರಿಶೀಲನೆ ನಡೆಸಿದ ಬೊಮ್ಮಾಯಿ, ಶಾಶ್ವತ ಪರಿಹಾರ ಕೊಡುತ್ತೇನೆ ಎಂದರು.



Join Whatsapp