ಬೆಂಗಳೂರು: ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಭಾರೀ ಮಳೆಗೆ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ತೀವ್ರ ಹಾನಿಗೀಡಾಗಿರುವ ಮನೆಗಳ ಕುಟುಂಬಸ್ಥರಿಗೆ 25 ಸಾವಿರ ರೂ ಪರಿಹಾರ ಧನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೀರು ನುಗ್ಗಿ ಸಮಸ್ಯೆಯಾದವರಿಗೆ ಊಟದ ವ್ಯವಸ್ಥೆ ಕಲ್ಪಿಸುತ್ತೇವೆ. ಮತ್ತು ಮನೆ ಕ್ಲೀನ್ ಮಾಡಿಸಿ ಕೊಡುವ ವ್ಯವಸ್ಥೆ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ ಮನೆ ಕಟ್ಟಿಕೊಂಡಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ ಎಂದ ತಿಳಿಸಿದರು.
ಮಳೆಯಿಂದ ಹಾನಿಯಾದ ಬೆಂಗಳೂರಿನ ಕೆಲ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದು, ಹೊಸಕೆರೆಹಳ್ಳಿ ದತ್ತಾತ್ರೇಯ ಟೆಂಪಲ್ ಬಳಿ ಪರಿಶೀಲನೆ ನಡೆಸಿದ ಬೊಮ್ಮಾಯಿ, ಶಾಶ್ವತ ಪರಿಹಾರ ಕೊಡುತ್ತೇನೆ ಎಂದರು.