Home ಕ್ರೀಡೆ ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ, 26 ಮಂದಿ ಸಾವು

ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ, 26 ಮಂದಿ ಸಾವು

ದೆಹಲಿ: ವಾಣಿಜ್ಯ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದೆ‌.

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, 24 ಅಗ್ನಿಶಾಮಕ ವಾಹನಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಇದುವರೆಗೆ ಸುಮಾರು 70 ಜನರನ್ನು ಕಟ್ಟಡದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ಕಂಪನಿಗಳ ಕಚೇರಿಗಳು ಬೆಂಕಿಗೆ ತುತ್ತಾದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Join Whatsapp
Exit mobile version