ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ 800 ದಾಟಿದ ಡೆಂಗ್ಯೂ ಬಾಧಿತರ ಸಂಖ್ಯೆ!

Prasthutha|

ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 800 ದಾಟಿದೆ.

- Advertisement -

ರಾಜ್ಯದಲ್ಲಿ ಇದುವರೆಗೆ 859 ಪ್ರಕರಣಗಳು ವರದಿಯಾಗಿವೆ. ಗಾಝಿಯಾಬಾದ್‌ನಲ್ಲಿ 26 ಹೊಸ ಪ್ರಕರಣಗಳು ವರದಿಯಾಗಿದ್ದು, ಒಂದು ತಿಂಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 547ಕ್ಕೆ ಏರಿದೆ. ಸದ್ಯ 108 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 56 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಮಕ್ಕಳಲ್ಲಿ ಸೋಂಕು ಹರಡುವ ಭೀತಿ ಇರುವುದರಿಂದ ಎಚ್ಚರಿಕೆ ವಹಿಸಲು ಗಾಝಿಯಾಬಾದ್ ಮುಖ್ಯ ವೈದ್ಯಾಧಿಕಾರಿಗಳು ಕರೆ ನೀಡಿದ್ದಾರೆ.

Join Whatsapp