Home ಟಾಪ್ ಸುದ್ದಿಗಳು ಉತ್ತರ ಪ್ರದೇಶ | ಹತ್ರಾಸ್’ನ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ: 27 ಮಂದಿ ಸಾವು

ಉತ್ತರ ಪ್ರದೇಶ | ಹತ್ರಾಸ್’ನ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ: 27 ಮಂದಿ ಸಾವು

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.


“ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.


ಪುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗದಲ್ಲಿ ಈ ಘಟನೆ ನಡೆದಿದೆ ಎಂದು ಇಟಾಹ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

Join Whatsapp
Exit mobile version