ನೀಟ್ ಪಿಜಿ ಕೌನ್ಸಿಲಿಂಗ್ ನಲ್ಲಿ ಒಬಿಸಿಗೆ ಶೇ.27 ಮೀಸಲಾತಿ: ಕೇಂದ್ರದ ನಿಲುವಿಗೆ ಸುಪ್ರೀಂ ಸಮ್ಮತಿ

Prasthutha|

ನವದೆಹಲಿ: ರಾಜ್ಯ ಸರ್ಕಾರದ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪಿಜಿ ಮತ್ತು ಯುಜಿ ಕೌನ್ಸೆಲಿಂಗ್ ನಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 27 ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನಿಲುವಿಗೆ ಸುಪ್ರೀಂ ಕೋರ್ಟ್ ಅನುಮತಿಸಿದೆ.

- Advertisement -

ಅಖಿಲ ಭಾರತ ಕೋಟಾ ಸೀಟುಗಳಡಿ ರಾಜ್ಯ ಸರ್ಕಾರದ ವೈದ್ಯಕೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 27 ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿರುವ ಮನವಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಈ ಆದೇಶ ನೀಡಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡ ಬ್ಲ್ಯುಎಸ್) 8 ಲಕ್ಷ ರೂಪಾಯಿ ಮಿತಿ ವಿಧಿಸಿರುವುದು ಎಂದಿನಂತೆ ಮುಂದುವರಿಯಲಿದೆ. ಇಡಬ್ಲುಎಸ್ ಮಾನದಂಡಗಳ ಅಂತಿಮ ಸಿಂಧುತ್ವವನ್ನು ಮಾರ್ಚ್ ಮೂರನೇ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

Join Whatsapp