ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿಯಾಗಿರುವುದನ್ನು ಬಿಬಿಎಂಪಿ ಖಚಿತಪಡಿಸಿದೆ.

- Advertisement -


ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಹೆಲ್ತ್ ಆಡಿಟ್ ದೃಢಪಡಿಸಿದೆ.


ಕಳೆದ ಶುಕ್ರವಾರ ಎರಡು ಡೆಂಗ್ಯೂ ಶಂಕಿತ ಸಾವು ಪ್ರಕರಣಗಳು ಸಂಭವಿಸಿತ್ತು. ಆ ಪೈಕಿ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯೂ ಕಾರಣ. ಆದರೆ 80 ವರ್ಷದ ವೃದ್ಧೆಯ ಸಾವಿಗೆ ಡೆಂಗ್ಯೂ ಕಾರಣವಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಹೊಸದಾಗಿ 213 ಡೆಂಗ್ಯೂ ಪ್ರಕರಣಗಳ ಪತ್ತೆಯಾಗಿದೆ. ಜೂನ್ ತಿಂಗಳಲ್ಲಿ 1,742 ಜನ ಡೆಂಗ್ಯೂ ಸೊಂಕಿಗೆ ಒಳಗಾದಂತಾಗಿದೆ.



Join Whatsapp