ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Prasthutha|

ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

- Advertisement -

19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥ 29 ವಿದ್ಯಾರ್ಥಿಗಳನ್ನು ಮಿಮ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp