ನವೆಂಬರ್ ಅಂತ್ಯದೊಳಗೆ ಎಲ್ಲರಿಗೂ 2 ಡೋಸ್ ಲಸಿಕೆ ಗುರಿ: ಡಾ.ಸುಧಾಕರ್

Prasthutha|

ಬೆಂಗಳೂರು: ನವೆಂಬರ್ ಅಂತ್ಯದೊಳಗಾಗಿ ರಾಜ್ಯದ ಎಲ್ಲ ವಯಸ್ಕರಿಗೂ 2 ಡೋಸ್ ಕೋವಿಡ್ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 23 ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ಬಳಿಕ ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ತಿಂಗಳ ಒಳಗಾಗಿ ಎಲ್ಲರಿಗೂ ಮೊದಲ ಡೋಸ್ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

- Advertisement -


ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಂಭವನೀಯ 3ನೇ ಕೋವಿಡ್ ಅಲೆ ತಡೆಯಲು ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಕಳೆದ ವರ್ಷವೂ ಸರಳ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿತ್ತು. ಅದರಂತೆ ಶೇಕಡ 2ಕ್ಕಿಂತ ಪಾಸಿಟಿವಿಟಿ ದರ ಕಡಿಮೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದರು. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿ ಸಾಗಿರುವುದು ಸರ್ಕಾರ ಜನಪರವಾಗಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಸಚಿವ ಸುಧಾಕರ್ ಹೇಳಿದರು.

Join Whatsapp