2ನೇ ಹಂತದ ಚುನಾವಣೆ: 14 ಲೋಕಸಭಾ ಕ್ಷೇತ್ರಗಳಲ್ಲಿ 337 ಅಭ್ಯರ್ಥಿಗಳು

Prasthutha|

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. 14 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು 337 ಅಭ್ಯರ್ಥಿಗಳು 503 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 309 ಪುರುಷರು ಹಾಗೂ 28 ಮಹಿಳೆಯರು ಅಭ್ಯರ್ಥಿಗಳಾಗಿದ್ದಾರೆ.

- Advertisement -

ಏಪ್ರಿಲ್ 22ರ ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 40 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, ಬಳ್ಳಾರಿಯಲ್ಲಿ ಅತಿ ಕಡಿಮೆ 11 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆಯಲಿದೆ.

Join Whatsapp