Home ಜಾಲತಾಣದಿಂದ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ| ರಿಸಲ್ಟ್​ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ| ರಿಸಲ್ಟ್​ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಭರಾಟೆಯ ನಡುವೆ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ.

ಫಲಿತಾಂಶ ಪ್ರಕಟವಾದ ಮೇಲೆ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದು.

ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ www.karresults.nic.in ನಲ್ಲಿ ಪಡೆಯಬಹುದಾಗಿದೆ.

ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು ಇದ್ದಾರೆ. 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್​) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳಿದ್ದಾರೆ.

Join Whatsapp
Exit mobile version