ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಜಿಲ್ಲೆಯ ಅಮೂಲ್ಯ ಕಾಮತ್, ದೀಪಶ್ರೀ ರಾಜ್ಯಕ್ಕೆ ಪ್ರಥಮ

- Advertisement -

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡದ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರು 600ಕ್ಕೆ ‌599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದರೆ. ದಕ್ಷಿಣ ಕನ್ನಡದ ಜಿಲ್ಲೆಯ ಕೆನಾರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ದೀಪಶ್ರೀ ಅವರು 600 ಕ್ಕೆ ‌599 ಅಂಕ ಗಳಿಸಿ ಕಾಮರ್ಸ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

- Advertisement -

ಅಂತೆಯೇ ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ ‌597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.

- Advertisement -


Must Read

Related Articles