Home ಟಾಪ್ ಸುದ್ದಿಗಳು ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಸಾಂದರ್ಭಿಕ ಚಿತ್ರ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.

kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.

Join Whatsapp
Exit mobile version