ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Prasthutha|

►ಎಂದಿನಂತೆ ಬಾಲಕಿಯರೇ ಮೇಲುಗೈ

- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 61.88 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಎಂದಿನಂತೆ  ಈ ಸಾಲಿನಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ ವಿವರಣೆ ನೀಡಿದರು.

- Advertisement -

ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ www.karresults.nic.in ಗೆ ಭೇಟಿ ನೀಡಬಹುದು.

4,02,697 ಹೊಸ ವಿದ್ಯಾರ್ಥಿಗಳು, 14,403 ಪುನರಾವರ್ತಿತ ವಿದ್ಯಾರ್ಥಿಗಳು, 5,866 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 4,22,966 ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

346557 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 191380 ಬಾಲಕರು ಉತ್ತೀರ್ಣರಾಗಿದ್ದಾರೆ. 337006 ಬಾಲಕಿಯರ ಪೈಕಿ 231586 ಬಾಲಕಿಯರು ತೇರ್ಗಡೆಹೊಂದಿದ್ದಾರೆ.

ಕಲಾ ವಿಭಾಗದಲ್ಲಿ ಶೇಕಡಾ 54.10, ವಾಣಿಜ್ಯ ವಿಭಾಗದಲ್ಲಿ ಶೇಕಡಾ 70.46ರಷ್ಟು, ವಿಜ್ಞಾನ ವಿಭಾಗದಲ್ಲಿ ಶೇಕಡಾ 75.34ರಷ್ಟು ಸೇರಿ ಒಟ್ಟು 67.14ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರಿಶಿಷ್ಟ ಜಾತಿಯ ಶೇಕಡಾ 49.76ರಷ್ಟು ವಿದ್ಯಾರ್ಥಿಗಳು, ಪರಿಶಿಷ್ಟ ಪಂಗಡದ 51.82ರಷ್ಟು ವಿದ್ಯಾರ್ಥಿಗಳು, ಸಿ-1 ವಿಭಾಗದ ಶೇಕಡಾ 61.07ರಷ್ಟು, 2-ಎ ವಿಭಾಗದ ಶೇಕಡಾ 67.47ರಷ್ಟು ವಿದ್ಯಾರ್ಥಿಗಳು, 2-ಬಿ ವಿಭಾಗದ 57.44ರಷ್ಟು ವಿದ್ಯಾರ್ಥಿಗಳು, 3-ಎ ವಿಭಾಗದ 70.43ರಷ್ಟು ವಿದ್ಯಾರ್ಥಿಗಳು 3-ಬಿ ವಿಭಾಗದ 68.55ರಷ್ಟು ವಿದ್ಯಾರ್ಥಿಗಳು, ಸಾಮಾನ್ಯ ವರ್ಗದ 65.82ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕನ್ನಡ ಮಾಧ್ಯಮದಲ್ಲಿ ಓದಿದವರಲ್ಲಿ ಶೇಕಡಾ 51.38ರಷ್ಟು ವಿದ್ಯಾರ್ಥಿಗಳು, ಇಂಗ್ಲೀಷ್ ಮಾಧ್ಯಮದ 69.99ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇಕಡಾ 91,106 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ನಲ್ಲಿ (ಶೇ.85 ಹಾಗೂ ಅದಕ್ಕಿಂತ ಹೆಚ್ಚು) ಉತ್ತೀರ್ಣರಾಗಿದ್ದರೆ 2,14,115 ವಿದ್ಯಾರ್ಥಿಗಳು ಪ್ರಥಮ ದರ್ಜೆ, 68,444 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 49,301 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.

Join Whatsapp