ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.