ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ.

- Advertisement -


ತಾಳೇಬೈಲಿನ ಶಿಲ್ಪಾ ಎಂ.ಗೌಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.


ಶಿಲ್ಪಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತ ಪಟ್ಟಿದ್ದಾಳೆ.

- Advertisement -


ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರೀಕ್ಷೆ ನಿರೀಕ್ಷೆಯಷ್ಟು ಚೆನ್ನಾಗಿ ಮಾಡಿಲ್ಲ ಎಂಬ ಬೇಸರಕ್ಕೆ ಸಾವಿಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp