ಕರಾವಳಿಯಲ್ಲಿ 3 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡ ಮಾರುತ ಹಾಗೂ ಅದರಿಂದ ಮರುಹುಟ್ಟು ಪಡೆದ ಶಾನ್ ಚಂಡ ಮಾರುತದ ಪ್ರಭಾವ ಅರಬ್ಬಿ ಸಮುದ್ರದ ಮೇಲೂ ಆಗುತ್ತಿದ್ದು, ರಾಜ್ಯದಲ್ಲಿ ಅಕ್ಟೋಬರ್ 1ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆಯಿಂದ ಅಕ್ಟೋಬರ್ 3ರವರೆಗೆ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಅ.3ರ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.

Join Whatsapp