ಮೂರು ಡಿಸಿಎಂ ಬೇಕು ಅಂತ ರಾಜಣ್ಣ ಕೇಳೋದ್ರಲ್ಲಿ ಏನು ತಪ್ಪಿದೆ: ಪರಮೇಶ್ವರ್ ಪ್ರಶ್ನೆ

Prasthutha|

- Advertisement -

ಬೆಂಗಳೂರು: ಮೂರು ಡಿಸಿಎಂ ಸ್ಥಾನ ನೀಡಬೇಕು ಎಂಬ ಸಚಿವ ರಾಜಣ್ಣ ಮಾತನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸಹ ಸಮರ್ಥಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಜಣ್ಣ ಕೇಳೋದ್ರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಸಿಎಂಗೂ ಹೈಕಮಾಂಡ್‌ಗೂ ಅವರೇ ತಿಳಿಸಬೇಕು. ಅವರ ವೈಯಕ್ತಿಕ ಅಭಿಪ್ರಾಯ, ಅವರ ಅನಿಸಿಕೆ ಬಗ್ಗೆ ಅವರೇ ಹೇಳಬೇಕು. ಡಿಸಿಎಂ ಮಾಡಬೇಕು ಎಂಬ ಅವರ ಉದ್ದೇಶ ಒಳ್ಳೆಯದೆ. ಲೋಕಸಭೆ ಚುನಾವಣೆ ಮುಂಚೆ ಸಮುದಾಯಗಳಿಗೆ ಡಿಸಿಎಂ ಮಾಡಬೇಕು ಅಂತ ರಾಜಣ್ಣ ಹೇಳಿದ್ದಾರೆ. ತೀರ್ಮಾನ ಮಾಡುವವರು ಬಿಡುವವರು ಎಐಸಿಸಿ ನಾಯಕರು. ಡಿಸಿಎಂ ಸ್ಥಾನ ಮಾಡುವ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿರುವುದು ಎಂದಿದ್ದಾರೆ.