ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : ಜಾರ್ಖಂಡ್‍ನ 3 ಮಹಿಳೆಯರ ಬಂಧನ

Prasthutha|

ಬೆಂಗಳೂರು: ಹೊರ ರಾಜ್ಯದಿಂದ ಕರ್ನಾಟಕಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಮಹಿಳಾ ಡ್ರಗ್ ಪೆಡ್ಲರ್‌ಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಗಳನ್ನು ಪ್ರೇಮಾ, ಸುನೀತಾ ಮತ್ತು ಮುತ್ಯಾಲಮ್ಮ ಎಂದು ಗುರುತಿಸಲಾಗಿದೆ. ಆರೋಪಿಗಳು ಜಾರ್ಖಂಡ್ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿದ್ದರು. ಬಳಿಕ ಅದನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿದ್ದ ಆರೋಪಿಗಳು ಸಣ್ಣ ಸಣ್ಣ ಪ್ಯಾಕೆಟ್‍ಗಳನ್ನು ಮಾಡಿಕೊಂಡು ಮಾರಾಟ ಮಾಡುತ್ತಿದ್ದರು. ಅಲ್ಲದೆ ಕೆಲ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.