ಅಯೋಧ್ಯೆ: ಓವರ್ಟೇಕ್ ಮಾಡಲು ಯತ್ನಿಸುತ್ತಿದ್ದ ವೇಳೆ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಲಖನೌ-ಗೋರಖ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದೆಹಲಿಯಿಂದ ಬರುತ್ತಿದ್ದ ಖಾಸಗಿ ಬಸ್, ಮುಮ್ತಾಜ್ ನಗರ ಪ್ರದೇಶದ ಹೆದ್ದಾರಿಯಲ್ಲಿ ಮುಂಜಾನೆ 7 ಗಂಟೆ ಸುಮಾರಿಗೆ ಪಲ್ಟಿ ಹೊಡೆದಿದೆ ಎಂದು ತಿಳಿಸಿದ್ದಾರೆ.
ಎಲ್ಲ ಗಾಯಾಳುಗಳನ್ನು ಫೈಜಾಬಾದ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 12 ಜನರನ್ನು ದಾಖಲಿಸಲಾಗಿದ್ದು, ಇನ್ನುಳಿದವರು ಪ್ರಾಥಮಿಕ ಚಿಕಿತ್ಸೆ ಪಡೆದು ಮರಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.