20 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: 3 ಮಂದಿ ಮೃತ್ಯು

Prasthutha|

ಚೆನ್ನೈ: ಕಾರೊಂದು 20 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

- Advertisement -

ಕಾರು ರಾಮನಾಥಪುರದಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ತಿರುಚ್ಚಿ-ಚೆನ್ನೈ ಹೆದ್ದಾರಿಯ ಮಧುರಾಂತಗಂ ಬಳಿ ಕಾರು ಕಂದಕಕ್ಕೆ ಉರುಳಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನವು ಸುರಕ್ಷತಾ ಗೋಡೆಯ ಮೇಲೆ ಹೋಗಿ ಕಂದಕಕ್ಕೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ತಂಡ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Join Whatsapp