Home ಟಾಪ್ ಸುದ್ದಿಗಳು ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 3 ಜನ ಮೃತ್ಯು

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 3 ಜನ ಮೃತ್ಯು

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದು 3 ಜನ ಸಾವನ್ನಪ್ಪಿದ್ದಾರೆ.


ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Join Whatsapp
Exit mobile version