ಉತ್ತರ ಪ್ರದೇಶ: ಮನೆಗೆ ನುಗ್ಗಿ ಗುಂಡಿನ ದಾಳಿ, ಮೂವರು ಮುಸ್ಲಿಮರ ಹತ್ಯೆ

Prasthutha: June 28, 2021

ಲಕ್ನೋ: ಮುಸ್ಲಿಮ್ ಕುಟುಂಬ ವಾಸಿಸುತ್ತಿದ್ದ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು, ಯದ್ವಾತದ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃಪಟ್ಟು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಾಜಿಯಾಬಾದ್ ನ ಲೋನಿ ಬಳಿ‌ ಕಳೆದ ರಾತ್ರಿ ನಡೆದಿದೆ.


ಜಿಲ್ಲೆಯ ಉನ್ನತ ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈವರೆಗೆ ಯಾರನ್ನೂ ಬಂಧಿಸಿಲ್ಲ.
ಅಪರಿಚಿತ ದುಷ್ಕರ್ಮಿಗಳು 70 ವರ್ಷದ ಬಟ್ಟೆ ವ್ಯಾಪಾರಿ ರೈಸುದ್ದೀನ್, 30 ವರ್ಷ ಪ್ರಾಯದ ಅವರ ಪುತ್ರ ಅಝರ್ ಮತ್ತು 28 ವರ್ಷದ ಪ್ರಾಯದ ಮಗ ಇಮ್ರಾನ್ ಅವರನ್ನು ಭಾನುವಾರ ತಡರಾತ್ರಿ ಮನೆಯಲ್ಲೇ ಗುಂಡಿಕ್ಕಿ ಹತ್ಯೆಗೈಯ್ದಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಸುದ್ದೀನ್ ಅವರ 65 ವರ್ಷದ ಪತ್ನಿ ಫಾತಿಮಾ ಅವರ ಮೇಲೂ ಗುಂಡು ಹಾರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದಾಗ ಮನೆಯಲ್ಲಿ ಐವರು ಸದಸ್ಯರು ಇದ್ದರು. ಆದರೆ, ಘಟನೆಯಲ್ಲಿ ಅದೃಷ್ಟವಶಾತ್ ಗರ್ಭಿಣಿಯೊಬ್ಬರು ಯಾವುದೇ ಗಾಯಗಳಿಲ್ಲದೆ ಬದುಕುಳಿದಿದ್ದಾರೆ.


ಫೋರೆನ್ಸಿಕ್ ತಂಡ ಮತ್ತು ಶ್ವಾನ ದಳವನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
“ಒಂದೇ ಕುಟುಂಬದ ನಾಲ್ವರಿಗೆ ಗುಂಡು ಹಾರಿಸಲಾಗಿದೆ, ಅದರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಗಾಜಿಯಾಬಾದ್ ಎಸ್‌ಎಸ್‌ಪಿ ಅಮಿತ್ ಪಾಠಕ್ ತಿಳಿಸಿದ್ದಾರೆ.
“ಪ್ರಕರಣವನ್ನು ವಿವಿಧ ಕೋನಗಳಿಂದ ತನಿಖೆ ಮಾಡಲು ನಾವು ಮೂರು ತಂಡಗಳನ್ನು ರಚಿಸಿದ್ದೇವೆ. ಪ್ರಕರಣದ ಎಲ್ಲಾ ಸಂಗತಿಗಳು ಬೆಳಕಿಗೆ ಬಂದ ನಂತರವೇ ನಾವು ಏನನ್ನಾದರೂ ಹೇಳಲು ಸಾಧ್ಯ ಎಂದು ಅವರು ಹೇಳಿದರು.
ಎಷ್ಟು ದಾಳಿಕೋರರು ಮನೆಗೆ ಪ್ರವೇಶಿಸಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ