ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

Prasthutha|

ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೂವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಭಾನುವಾರ ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ನಂತರ ಬಿಡುಗಡೆ ಮಾಡಲಾಗಿದೆ.
ಉತ್ತರ ಬಂಗಾಳದಲ್ಲಿ ಹೆಚ್ಚುತ್ತಿರುವ COVID-19 ಸಾವುಗಳ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರಾದ ಶಂಕರ್ ಘೋಷ್, ಆನಂದಮೊಯ್ ಬರ್ಮನ್ ಮತ್ತು ಸಿಖಾ ಚಟ್ಟೋಪಾಧ್ಯಾಯ ಅವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರು ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರತಿಭಟನಾ ಸಂದರ್ಭದಲ್ಲಿಯೇ ಅವರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಬಿಜೆಪಿ ಶಾಸಕರು ಲಾಕ್ ಡೌನ್ ಮಧ್ಯೆ ಧರಣಿ ನಡೆಸುವ ಮೂಲಕ ಅಲ್ಲಿನ ಪ್ರದೇಶದ ಜನರಿಗೆ “ದ್ರೋಹ” ಮಾಡಿದ್ದಾರೆ ಎಂದು ಟಿಎಂಸಿ ಹಿರಿಯ ಮುಖಂಡ ಗೌತಮ್ ಹೇಳಿದ್ದಾರೆ.
ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, “ಮಾರಣಾಂತಿಕ ವೈರಸ್ ಹರಡುತ್ತಿರುವುದರ ಬಗ್ಗೆ ಕನಿಷ್ಠ ತಲೆಕೆಡಿಸಿಕೊಳ್ಳದ ಬಿಜೆಪಿ ನಾಯಕರ ನೈಜ ಮುಖವನ್ನು ಜನರು ನೋಡಲಿ. ಬಿಕ್ಕಟ್ಟಿನ ಸಂದರ್ಭಗಳನ್ನು ರಾಜಕೀಯಗೊಳಿಸುವುದರಲ್ಲಿ ಮಾತ್ರ ಬಿಜೆಪಿಗರು ಉತ್ಸುಕರಾಗಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

- Advertisement -