ಸಾರ್ವಜನಿಕರ ಬಳಿ ಇರುವ ವನ್ಯಜೀವಿ ಅಂಗಾಂಗ ವಾಪಸ್ ಮಾಡಲು 3 ತಿಂಗಳು ಅವಕಾಶ: ಈಶ್ವರ್ ಖಂಡ್ರೆ

Prasthutha|

ಬೆಂಗಳೂರು: ಸಾರ್ವಜನಿಕರ ಬಳಿ ಇರುವ ವನ್ಯಜೀವಿ ಅಂಗಾಂಗಗಳನ್ನು ಅರಣ್ಯ ಇಲಾಖೆಗೆ ವಾಪಸ್ ಮಾಡಲು 3 ತಿಂಗಳ ಅವಧಿ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಇಂದು ವಿಕಾಸ ಸೌಧದಲ್ಲಿ ಸಭೆ ನಡೆಸಿ 3 ತಿಂಗಳ ಕಾಲಾವಕಾಶ ಕೊಡುವ ನಿರ್ಧಾರ ಮಾಡಲಾಗಿದೆ.

- Advertisement -

ಅರಣ್ಯ ಇಲಾಖೆ, ಕಾನೂನು ಇಲಾಖೆ ಸಭೆ ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ವನ್ಯಜೀವಿ ಅಂಗಾಗ ವಾಪಸ್ ಕೊಡಲು ಕೊನೇ ಅವಕಾಶ ಕೊಡಲು ತೀರ್ಮಾನ ಮಾಡಲಾಗಿದೆ. ಒನ್ ಟೈಂ ಪ್ರಾಣಿ ಅಂಗಾಂಗ ಹಿಂತಿರುಗಿಸಲು 3 ತಿಂಗಳು ಸಮಯ ಕೊಡಲು ತೀರ್ಮಾನ ಆಗಿದೆ. ಕಾನೂನು ಇಲಾಖೆ ಕೂಡಾ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.



Join Whatsapp