ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾದ 3 ರಾಜಕೀಯ ನಾಯಕರು

Prasthutha|

ಬೆಂಗಳೂರು: ರಾಜ್ಯದ ಮೂರು ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರೆ,ಮೈಸೂರಿನ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಕೂಡ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನೂ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರುಪಡಿಸಲಾಗಿದೆ. ಈ ಮೂಲಕ ಮಾಜಿ ಸಿಎಂ, ಮಾಜಿ ಸಚಿವ, ಮಾಜಿ ಸಂಸದ ಮೂವರು ಒಂದೇ ಬಾರಿಗೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

Join Whatsapp