Home ಟಾಪ್ ಸುದ್ದಿಗಳು ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತ್ಯು

ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತ್ಯು

ಚಿಕ್ಕಬಳ್ಳಾಪುರ: ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.

ಇಮ್ರಾನ್ ಖಾನ್(20), ರಾಧಿಕಾ(19) ಹಾಗೂ ಪೂಜಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ವೀಕೆಂಡ್ ಎಂದು ಕರ್ನಾಟಕ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ಇಮ್ರಾನ್ ಖಾನ್, ವಿಕಾಸ್, ಚನ್ನರಾಮ್ ಎಂಬ ಆರು ವಿದ್ಯಾರ್ಥಿಗಳು ಮೂರು ಬೈಕುಗಳಲ್ಲಿ ಶನಿವಾರ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಪಿಕ್‌ನಿಕ್ ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳು ಜಲಾಶಯ ಹಿಂಭಾಗದ ಹಿನ್ನೀರಿನಲ್ಲಿ ಈಜಾಡಲು ಹೋಗಿದ್ದು, ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Join Whatsapp
Exit mobile version