ಮೂರು ವರ್ಷದ ಬಾಲಕಿಯ ಅತ್ಯಾಚಾರ | ಕತ್ತು ಹಿಸುಕಿ ಕೊಲೆ | ಉ.ಪ್ರ.ದಲ್ಲಿ 20 ದಿನಗಳಲ್ಲಿ ಮೂರನೇ ಪ್ರಕರಣ

Prasthutha|

ಲಖನೌ : ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೆ ಕ್ರಿಮಿನಲ್ ಗಳು ಅಟ್ಟಹಾಸ ಮೆರೆದಿದ್ದಾರೆ. ಮೂರು ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು, ಕತ್ತು ಹಿಸುಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಲಖೀಂಪುರ ಖೇರಿಯಲ್ಲಿ ನಡೆದಿದೆ. ಕಳೆದ 20 ದಿನಗಳಲ್ಲಿ ಮೂರನೇ ಅತ್ಯಾಚಾರ – ಕೊಲೆ ಪ್ರಕರಣ ಇದಾಗಿದೆ.

ಬಾಲಕಿ ಬುಧವಾರದಿಂದ ನಾಪತ್ತೆಯಾಗಿದ್ದಳು. ಆಕೆಯ ಮೃತದೇಹ ಮನೆಯಿಂದ ಅರ್ಧ ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಲೆಗೆ ಏಟಾಗಿರುವುದು ಕಂಡು ಬಂದಿದೆ. ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

- Advertisement -

ಲಖೀಂಪುರ ಜಿಲ್ಲೆಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ಓರ್ವ 13 ವರ್ಷದ ಬಾಲಕಿ ಮತ್ತು 17 ವರ್ಷದ ಬಾಲಕಿಯ ಮೇಲೆ ಇದೇ ರೀತಿ ಅತ್ಯಾಚಾರ ಮಾಡಿ, ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಈ ಘಟನೆಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಪ್ರದೇಶ ಜಂಗಲ್ ರಾಜ್ ಆಗಿ ಪರಿವರ್ತನೆಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

- Advertisement -