ಚಿತ್ರದುರ್ಗ: ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ, ಜೆಡಿಎಸ್ ನಿಂದ 25 ರಿಂದ 30 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಶಾಲಿ ಆಗಲಿದೆ ಎಂದರು.
ಇದೇ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರ, ‘ಜಗದೀಶ್ ಶೆಟ್ಟರ್ ಅವರು ಮಾಜಿ ಸಿಎಂ ಆಗಿದ್ದವರು. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಾನು ಇದ್ದವನು. ಕಾನೂನು ಸುವ್ಯವಸ್ಥೆ ಹೇಗಿತ್ತು ಎಂದು ನೋಡಿದ್ದೇನೆ. ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದ್ದು, ರಾಜ್ಯದಲ್ಲಿ ಅಚ್ಚುಕಟ್ಟಾಗಿದೆ ಎಂದು ತಿರುಗೇಟು ನೀಡಿದ್ದಾರೆ.