Home ಟಾಪ್ ಸುದ್ದಿಗಳು ಫಿನ್ ಲ್ಯಾಂಡ್ ನಿಂದ 30 ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಂಡ ಏರಿಯಲ್ ಲ್ಯಾಡೆರ್ ಪ್ಲಾಟ್...

ಫಿನ್ ಲ್ಯಾಂಡ್ ನಿಂದ 30 ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಂಡ ಏರಿಯಲ್ ಲ್ಯಾಡೆರ್ ಪ್ಲಾಟ್ ಫಾರ್ಮ್ ನಾಳೆ ಲೋಕಾರ್ಪಣೆ

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ತುರ್ತು ಅಗ್ನಿ ಅವಘಡ ಸಂದರ್ಭದಲ್ಲಿ ಸುಮಾರು 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ.

ಲೋಕಾರ್ಪಣೆ ಸಮಾರಂಭವನ್ನು ನಾಳೆ ಗುರುವಾರ ಮುಂಜಾನೆ ಹತ್ತು ಗಂಟೆಗೆ ವಿಧಾನ ಸೌಧದ ಗ್ರಾಂಡ್ ಸ್ಟೆಪ್ ಮುಂಭಾಗ ಹಮ್ಮಿಕೊಳ್ಳಲಾಗಿದೆ.

ಅಗ್ನಿ ಶಾಮಕ ಪಡೆಗೆ ಅತ್ಯಂತ ಅಗತ್ಯವಾದ 90 ಮೀಟರ್ ಎತ್ತರಕ್ಕೆ ನಿಲುಕಲು ಸಾಧ್ಯವಾಗುವ ಏಣಿಯನ್ನು ರಾಜ್ಯ ಸರಕಾರ ಫಿನ್ ಲ್ಯಾಂಡ್ ದೇಶದಿಂದ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಆಮದು ಮಾಡಿಕೊಂಡು ಸಾರ್ವಜನಿಕರ ಸೇವೆಗೆ ಸಮರ್ಪಿಸುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಬಲಪಡಿಸಲು ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಸುಮಾರು ಎರಡು ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ, ಅಗ್ನಿಶಾಮಕದಳದ ಸೇವಾ ಘಟಕಗಳನ್ನು ಹೊಂದಿದ್ದು, ಇಲಾಖೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp
Exit mobile version