BJP ಸೇರಲು 30 ಕೋಟಿ ಆಫರ್: ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ

Prasthutha|

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸಿದ ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ 17 ಮಂದಿ ಶಾಸಕರನ್ನು ಖರೀದಿಸುವ ಸಂದರ್ಭದಲ್ಲಿ ಬಿಜೆಪಿ ನಾಯಕರು ನನಗೆ 30 ಕೋಟಿ ಆಫರ್ ಕೊಟ್ಟಿದ್ದರು. ಆದರೆ ನಾನು ಅದನ್ನು ನಿರಾಕರಿಸಿದೆ ಎಂದು ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

- Advertisement -


ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪ್ರಜಾ ಪ್ರತಿನಿಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಭ್ರಷ್ಟರ ಪಕ್ಷ. ಅದಕ್ಕೆ ಮತ ನೀಡಿ ಮತ್ತೊಮ್ಮೆ ಮೋಸಹೋಗಬೇಡಿ. ಬರುವ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ನೀಡಿ ಕ್ಷೇತ್ರ ಅಭಿವೃದ್ಧಿಗೆ ಸಹಕರಿಸಿ ಎಂದರು.


ಯುವಕರು ಬಿಜೆಪಿಯ ಹಿಂದೆ ಹೋಗಿ ಇಂದು ಲಕ್ಷಾಂತರ ಯುವಜನ ನಿರುದ್ಯೋಗಿಗಳಾಗಿದ್ದಾರೆ. ಯುವಕರಿಗೆ ಉದ್ಯೋಗ ಕಲ್ಪಿಸುತ್ತೆನೆಂದ ಬಿಜೆಪಿ ಸರ್ಕಾರ ಇಂದು ಲೂಟಿ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Join Whatsapp
Exit mobile version