Home ಟಾಪ್ ಸುದ್ದಿಗಳು ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

ದೇವನಹಳ್ಳಿ: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ಜಫ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಕಳೆದ ಜುಲೈನಲ್ಲಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ಕಿತ್ತು 4 ಕೋಟಿ ರೂ. ಮೌಲ್ಯದ ಚಿನ್ನ

ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದರು.

Join Whatsapp
Exit mobile version