ನಿಂತಿದ್ದ ಲಾರಿಗೆ ಮೂರು ಬಸ್ ಡಿಕ್ಕಿ: 30 ಜನರಿಗೆ ಗಾಯ

Prasthutha|

ನೆಲಮಂಗಲ: ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸಂಭವಿಸಿದೆ.

- Advertisement -

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ

Join Whatsapp