ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಿ: CWRC ಸೂಚನೆ

Prasthutha|

ನವದೆಹಲಿ: ಅಕ್ಟೋಬರ್ 16 ರಿಂದ 31ರ ವರೆಗೆ ತಮಿಳುನಾಡಿಗೆ ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

- Advertisement -

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಮಹತ್ವದ ಸಭೆ ನಡೆಸಿದ ಸಮಿತಿಯು ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಭೆ ನಡೆಸಿದ ಸಮಿತಿಯ ಅಧ್ಯಕ್ಷ ವಿನೀತ್ ಗುಪ್ತಾ ಶಿಫಾರಸ್ಸು ಮಾಡಿದ್ದಾರೆ.