Home ಟಾಪ್ ಸುದ್ದಿಗಳು ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 31 ವಿಪಕ್ಷ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version