ರಾಜೀವ್ ಗಾಂಧಿ 31ನೇ ಪುಣ್ಯತಿಥಿ: ಸೋನಿಯಾ, ಪ್ರಿಯಾಂಕಾ ಸೇರಿದಂತೆ ಗಣ್ಯರಿಂದ ಪುಷ್ಪಾರ್ಪಣೆ

Prasthutha|

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 31ನೇ ಪುಣ್ಯತಿಥಿಯಾಗಿದ್ದು, ಇದರ ಭಾಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ವೀರ ಭೂಮಿಯಲ್ಲಿ ಪುಷ್ಪಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಸೋನಿಯಾ ಅವರ ಜೊತೆ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ, ಅಳಿಯ ರಾಬರ್ಟ್ ವಾದ್ರಾ ಅವರು ಉಪಸ್ಥಿತರಿದ್ದರು. ಕಾಂಗ್ರೆಸ್ ಹಿರಿಯ ಮುಖಂಡರಾದ ಪಿ. ಚಿದಂಬರಂ, ಸಚಿನ್ ಪೈಲಟ್ ಸೇರಿದಂತೆ ಅನೇಕರು ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ದೆಹಲಿ ಸಿಎಮ್ ಅರವಿಂದ್ ಕೇಜ್ರಿವಾಲ್ ಒಳಗೊಂಡಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

- Advertisement -

ಇಂದಿರಾ ಗಾಂಧಿ ಹತ್ಯೆಯ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. 1984 ರಿಂದ 1989 ರವರೆಗೆ ಅವರು ಪ್ರಧಾನಿ ಹುದ್ದೆಯಲ್ಲಿದ್ದು, ಅತ್ಯಂತ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದರು.

1991 ರ ಮೇ 21 ರಂದು ರಾಜೀವ್ ಗಾಂಧಿ ಅವರನ್ನು ಹತ್ಯೆ ನಡೆಸಲಾಗಿತ್ತು.



Join Whatsapp