ಸಿದ್ದರಾಮಯ್ಯ, ಡಿಕೆಶಿ ಸೇರಿ 35 ಜನರ‌ ವಿರುದ್ಧ ಪ್ರಕರಣ ದಾಖಲು

Prasthutha|

ರಾಮನಗರ:  ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಆದೇಶ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 35 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ‌ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ ಕಾರಣ ವಿಪತ್ತು‌ ನಿರ್ವಹಣಾ ಕಾಯ್ದೆ ಅಡಿ ಸಾತನೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp