Home ಟಾಪ್ ಸುದ್ದಿಗಳು ಸಿದ್ದರಾಮಯ್ಯ, ಡಿಕೆಶಿ ಸೇರಿ 35 ಜನರ‌ ವಿರುದ್ಧ ಪ್ರಕರಣ ದಾಖಲು

ಸಿದ್ದರಾಮಯ್ಯ, ಡಿಕೆಶಿ ಸೇರಿ 35 ಜನರ‌ ವಿರುದ್ಧ ಪ್ರಕರಣ ದಾಖಲು

ರಾಮನಗರ:  ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಆದೇಶ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 35 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ‌ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ ಕಾರಣ ವಿಪತ್ತು‌ ನಿರ್ವಹಣಾ ಕಾಯ್ದೆ ಅಡಿ ಸಾತನೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version