ಹಾಸ್ಟೆಲ್’ನಲ್ಲಿ ಮಾಡಿದ್ದ ಉಪ್ಪಿಟ್ಟು ತಿಂದು 35 ವಿದ್ಯಾರ್ಥಿಗಳು ಅಸ್ವಸ್ಥ..!

Prasthutha|

ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ನಲ್ಲಿ ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದ್ದು, 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

- Advertisement -

ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್ ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಅಸ್ವಸ್ಥರಾಗಿದ್ದರು. ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


ನಿರ್ಲಕ್ಷ್ಯದ ಆರೋಪದ ಮೇಲೆ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ಹಾಸ್ಟೆಲ್ ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ.

Join Whatsapp