ಉಕ್ರೇನ್ ನಲ್ಲಿ ಸಿಲುಕಿದ್ದಾರೆ 3,500 ಕೇರಳಿಗರು: ಪಿಣರಾಯಿ ವಿಜಯನ್

Prasthutha|

ತಿರುವನಂತಪುರಂ: ಯುದ್ಧ ಪೀಡಿತ ಉಕ್ರೇನ್ ನಲ್ಲಿ 3,500 ಕೇರಳಿಗರು ಸಿಲುಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದ್ದಾರೆ.

- Advertisement -

ಉಕ್ರೇನ್ ನಲ್ಲಿ ಸಿಲುಕಿರುವ ಕೇರಳಿಗರ ತಕ್ಷಣದ ಸ್ಥಳಾಂತರಕ್ಕಾಗಿ ವಿದೇಶಾಂಗ ಸಚಿವಾಲಯವು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ವಿವರಗಳನ್ನು ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನಲ್ಲಿ ಸಿಲುಕಿರುವ ಮಲಯಾಳಿಗಳಿಗೆ ಸಹಾಯ ಮಾಡಲು ನೋರ್ಕಾ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ನಾವು ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ನೋರ್ಕಾ ಟ್ವೀಟ್ ಮಾಡಿದೆ.

Join Whatsapp