ಮೋದಿ ಸರಕಾರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿದ ಲಂಡನ್ ನ 36 ಸಂಸದರು

Prasthutha|

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ನೀತಿಯ ವಿರುದ್ಧ ಉತ್ತರ ಭಾರತದ ರೈತರು ಬೀದಿಗಿಳಿದಿರುವ ಹಿನ್ನೆಲೆಯಲ್ಲಿ ದೇಶದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದ್ದರೂ, ದೇಶದ ಮುಖ್ಯವಾಹಿನಿ ಮಾಧ್ಯಮಗಳು ಮಾತ್ರ ಸರಕಾರವನ್ನು ಸಮರ್ಥಿಸಿಕೊಳ್ಳುತ್ತಿರುವುದು ವಿಪರ್ಯಾಸ. ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಕೆನಡದ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ ಬೆನ್ನಲ್ಲೇ, ಇದೀಗ ಲಂಡನ್ ನ 36 ಸಂಸದರು ಭಾರತದ ರೈತರ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

- Advertisement -

ರೈತರ ಪ್ರತಿಭಟನೆಯ ವಿಷಯದ ಕುರಿತಂತೆ ನರೇಂದ್ರ ಮೋದಿ ಸರಕಾರದ ಜೊತೆ ಮಾತುಕತೆ ನಡೆಸುವಂತೆ ಬ್ರಿಟಿಷ್ ವಿದೇಶಾಂಗ ಸಚಿವ ಡೊಮಿನಿಕ್ ರಾಬ್ ಅವರಿಗೆ 36 ಸಂಸದರು ಪತ್ರ ಬರೆದು ಒತ್ತಾಯಿಸಿದ್ದಾರೆ. ಬ್ರಿಟಿಷ್ ವಿದೇಶಾಂಗ ಸಚಿವರಿಗೆ ಪತ್ರ ಬರೆದಿರುವ ಸಂಸದರಲ್ಲಿ ಭಾರತೀಯ ಮೂಲದ ಕೆಲವು ಸಂಸದರೂ ಇದ್ದಾರೆ.

Join Whatsapp