Home ಟಾಪ್ ಸುದ್ದಿಗಳು ವಿಶ್ವವಿದ್ಯಾಲಯಗಳಿಗೆ 3600 ಕೋಟಿ ರೂ. ಅನುದಾನ: ಪ್ರಹ್ಲಾದ ಜೋಶಿ

ವಿಶ್ವವಿದ್ಯಾಲಯಗಳಿಗೆ 3600 ಕೋಟಿ ರೂ. ಅನುದಾನ: ಪ್ರಹ್ಲಾದ ಜೋಶಿ

ಬೆಳಗಾವಿ: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಷಿ, ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಈಗಾಗಲೇ ಅದರ ಬಿಡುಗಡೆಯಾಗಲಿದೆ ಎಂದಿದ್ದಾರೆ.

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ₹ 100 ಕೋಟಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ದೊರೆಯಲಿದೆ ಎಂದು ಅವರು ತಿಳಿಸಿದರು.

ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ ಅವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ. ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

Join Whatsapp
Exit mobile version